ಸಚಿವ ಡಿ.ಸುಧಾಕರ್ ವಿರುದ್ಧ ಸುಳ್ಳು ಆರೋಪ

DR J SUJATHA hyr
Published on

ಹಿರಿಯೂರು: ಸಚಿವ ಡಿ.ಸುಧಾಕರ್ ವಿರುದ್ಧ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ತಾಪಂ ಮಾಜಿ ಅಧ್ಯಕ್ಷೆ ಡಾ.ಜೆ.ಆರ್.ಸುಜಾತಾ ತಿಳಿಸಿದ್ದಾರೆ.

ಜಾತ್ಯತೀತ ವ್ಯಕ್ತಿತ್ವ, ಸಾಮಾಜಿಕ ನ್ಯಾಯದಡಿ ಎಲ್ಲ ಸಮುದಾಯಗಳ ಪ್ರೀತಿ ವಿಶ್ವಾಸ ಗಳಿಸಿರುವ ಸುಧಾಕರ್ ಅವರ ರಾಜಕೀಯ ಬೆಳವಣಿಗೆ ಸಹಿಸದ ವಿರೋಧಿಗಳು ವಿನಾಕಾರಣ ತೇಜೋವಧೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಜಿಲ್ಲೆ ಮತ್ತು ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಅವರ ಬೆನ್ನಿಗೆ ಇದ್ದು, ಇಂತಹ ಪಿತೂರಿಗೆ ಹೆದರಬೇಕಾಗಿಲ್ಲ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net