ಮಹಿಳೆ ಸ್ವಾವಲಂಬಿಯಾದರೆ ಕುಟುಂಬ ಅಭಿವೃದ್ಧಿ

Family development if a woman becomes self-reliant
Published on

ನರೇಗಲ್ಲ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಸಮುದಾಯ, ಕುಟುಂಬ ಅಭಿವೃದ್ಧಿಯಾಗಲು ಸಾಧ್ಯ ಎಂದು ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದ ನಿರ್ದೇಶಕ ಶಿವಕುಮಾರ ಹೇಳಿದರು.

ಸಮೀಪದ ಬೂದಿಹಾಳ ಗ್ರಾಮದ ಶ್ರೀ ಬೀರದೇವರ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರ, ಎಸ್​ಬಿಐ, ರೀಸೆಟ್ ವತಿಯಿಂದ ಹಮ್ಮಿಕೊಂಡಿದ್ದ 10 ದಿನಗಳ ಊದುಬತ್ತಿ ತಯಾರಿಕೆ ಕಾರ್ಯಗಾರಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸುವ ಅತ್ಯಗತ್ಯತೆ ಹಿಂದಿಗಿಂತ ಇಂದು ಮುಖ್ಯವಾಗಿದೆ. ಮಹಿಳೆ ಅಡುಗೆ ಕೆಲಸಕ್ಕೆ ಸೀಮಿತವಾಗದೇ ಹಲವು ಬಗೆಯ ಕೌಶಲ ಬೆಳೆಸಿಕೊಂಡು ವಿವಿಧ ಆರ್ಥಿಕ ವೃತ್ತಿಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ದೇಸಾಯಿಪಟ್ಟಿ ಮಾತನಾಡಿ, ಸರ್ಕಾರ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿಗುವ ಸೌಲಭ್ಯ ಬಳಸಿಕೊಂಡು ಸಣ್ಣ ಪ್ರಮಾಣದ ಹಲವು ಉದ್ಯಮಗಳನ್ನು ಪ್ರಾರಂಭಿಸಿ ಆರ್ಥಿಕ ಪ್ರಗತಿ ಕಾಣಬೇಕು ಎಂದರು.

ಭೀಮಪ್ಪ ಬೇನಾಳ, ಉಮಾದೇವಿ ಚಿಗರಿ, ಮೇಲ್ವಿಚಾರಕಿ ಶ್ವೇತಾ ಕರಗಣ್ಣವರ, ಧರ್ಮಸ್ಥಳ ಸ್ವ ಸಹಾಯ ಗುಂಪುಗಳ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net