ದಾಂಪತ್ಯ ಕಲಹ- ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಸೆಕ್ಯೂರಿಟಿ ಗಾರ್ಡ್ !

Kalappa and sumitra
Published on

ಬೆಂಗಳೂರು: ದಾಂಪತ್ಯ ಕಲಹ ತಾರಕಕ್ಕೇರಿದ ಪರಿಣಾಮ ಸೆಕ್ಯೂರಿಟಿ ಗಾರ್ಡ್ ಒಬ್ಬ ತನ್ನ ಪತ್ನಿಗೆ ಗುಂಡಿಟ್ಟು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ವರದಿಯಾಗಿದೆ.

ಮೃತಳನ್ನು ಸುಮಿತ್ರಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ಎಟಿಎಂ ಸೆಕ್ಯೂರಿಟಿ ಗಾರ್ಡ್ ಕಾಳಪ್ಪ ಆರೋಪಿ. ಆತ್ಮಹತ್ಯೆಗೆ ಯತ್ನಿಸಿದ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದು, ಎಲ್ಲರಿಗೂ ವಿವಾಹವಾಗಿದೆ. ಎಟಿಎಂ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಕಾಳಪ್ಪ ಸಿಂಗಲ್ ಬ್ಯಾರಲ್ ಗನ್​ ಮನೆಗೆ ತಂದಿಟ್ಟುಕೊಳ್ಳುತ್ತಿದ್ದ. ಕಳೆದ ಐದು ವರ್ಷಗಳಿಂದ ಬಸವೇಶ್ವರ ನಗರದಲ್ಲಿ ಬಾಡಿಗೆ ಮನೆಯಲ್ಲಿದ್ದರು.

ನಿನ್ನೆ ಸಂಜೆ ಕೂಡ ದಂಪತಿ ನಡುವೆ ಜಗಳವಾಗಿದ್ದು, ಸುಮಿತ್ರಾ ಮಗಳ ಮನೆಗೆ ಹೋಗಿದ್ದರು. ಬೆಳಗ್ಗೆ ತಿಂಡಿ ಏನಾದರೂ ಮಾಡಿ ತಿಂದರೋ ಇಲ್ಲವೋ ಎಂದು ನೋಡಲು ಬಂದಿದ್ದ ಸುಮಿತ್ರಾ ಜತೆಗೆ ಮತ್ತೆ ಜಗಳವಾಗಿತ್ತು. ಜಗಳ ಅತಿರೇಕಕ್ಕೆ ಹೋದಾಗ ಸಿಂಗಲ್ ಬ್ಯಾರಲ್​ ಗನ್​​ನಿಂದಲೇ ಶೂಟ್ ಮಾಡಿದ್ದ. ಬಳಿಕ ತಾನೂ ಗುಂಡುಹೊಡೆದುಕೊಂಡಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net