ಸುದೀಪ್ ಹುಟ್ಟುಹಬ್ಬ ಹಿನ್ನೆಲೆ, ಕಟೌಟ್ ಮುಂದೆ ಅಭಿಮಾನಿಗಳು ಹೀಗಾ ಮಾಡೋದು..

kichchchc
Published on

ಬಳ್ಳಾರಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 50ನೇ ವಂಸತಕ್ಕೆ ಕಾಲಿಟ್ಟಿದ್ದಾರೆ. ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಬೇಕೆಂಬ ಆಸೆ ಹೊಂದಿದ್ದ ಅಭಿಮಾನಿಗಳಿಗೆ ಈ ಬಾರಿಯು ಕರೊನಾ ಮಹಾಮಾರಿ ನಿರಾಸೆ ಉಂಟುಮಾಡಿದೆ.

ಆದರೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ, ಕಿಚ್ಚನ ಕಟೌಟ್ ಮುಂದೆ ಕೋಣವನ್ನು ಬಲಿ ಕೊಟ್ಟಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸುದೀಪ್ ಅಭಿಮಾನಿಗಳು ಪ್ರಾಣಿ ಹಿಂಸೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಹಿಂದೆಯೂ ಹೀಗೆ ಆಗಿತ್ತು:

'ದಿ ವಿಲನ್' ಚಿತ್ರ ಯಶಸ್ವಿಯಾಗಲಿ ಎಂಬ ಕಾರಣಕ್ಕೆ ದಾವಣಗೆರೆಯಲ್ಲಿ ಕೋಣ ಮತ್ತು ಕುರಿಯೊಂದನ್ನು ಬಲಿ ನೀಡಿ ರಕ್ತವನ್ನು ಚಿತ್ರದ ಪೋಸ್ಟರ್‌ಗೆ ಅರ್ಪಣೆ ಮಾಡಿರುವ ಘಟನೆ ಸಹ ಹಿಂದೆ ನಡೆದಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net