ಅಭಿಮಾನಿಗಳಿಂದ ಶಾಸಕ ದರ್ಶನ್ ಹುಟ್ಟುಹಬ್ಬ ಆಚರಣೆ

8-pnp 1
ಶಾಸಕ ದರ್ಶನ್‌ಪುಟ್ಟಣ್ಣಯ್ಯ ಹುಟ್ಟುಹಬ್ಬದ ಅಂಗವಾಗಿ ಪಾಂಡವಪುರ ಪಟ್ಟಣದ ಪುರಸಭೆಯ ಪೌರಕಾರ್ಮಿಕರಿಗೆ ಬಟ್ಟೆ ವಿತರಿಸಲಾಯಿತು. ಸುನೀತಾ ಪುಟ್ಟಣ್ಣಯ್ಯ, ರಾಘವ ಪ್ರಕಾಶ್, ಎಸ್.ದಯಾನಂದ, ಚಿಕ್ಕಾಡೆ ಸಿ.ಎನ್.ವಿಜೇಂದ್ರ ಇತರರು ಇದ್ದರು.
Published on

ಪಾಂಡವಪುರ: ರೈತ ಸಂಘದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹಲವು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳ ಮೂಲ

ಕ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದರು.

ಪಟ್ಟಣದ ಬನ್ನಾರಿ ಮಾರಮ್ಮ ದೇವಸ್ಥಾನದಲ್ಲಿ ಬೆಳಗ್ಗೆ 9 ಗಂಟೆಗೆ ಸುನೀತಾ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ರೈತ ಸಂಘದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶಾಸಕರಿಗೆ ಶುಭ ಹಾರೈಸಿದರು.

ಬಳಿಕ ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಒಳ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸಿದರು. ನಂತರ ಪಟ್ಟಣದ ಪುರಸಭೆಯ ಮಹಿಳಾ ಮತ್ತು ಪುರುಷರು ಸೇರಿದಂತೆ 43 ಪೌರಕಾರ್ಮಿಕರಿಗೆ ಸೀರೆ ಮತ್ತು ಶರ್ಟ್‌ಗಳನ್ನು ವಿತರಣೆ ಮಾಡಿದರು. ಅಲ್ಲಿಂದ ಪಟ್ಟಣದ ಫ್ರೆಂಚ್‌ರಾಕ್ಸ್ ಶಾಲೆಗೆ ತೆರಳಿ ಶಾಲೆಯ ಸುಮಾರು 150ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್ ವಿತರಣೆ ಮಾಡುವ ಮೂಲಕ ನೆಚ್ಚಿನ ನಾಯಕನ ಅಭಿಮಾನ ಮೆರೆದರು.

ರೈತ ನಾಯಕಿ ಸುನೀತಾ ಪುಟ್ಟಣ್ಣಯ್ಯ ಮಾತನಾಡಿ, ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸದಂತೆ ನೀಡಿದ ಸಲಹೆಯನ್ನು ಲೆಕ್ಕಿಸದೆ ಕ್ಷೇತ್ರದಾದ್ಯಂತ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಕ್ಷೇತ್ರದ ಮತದಾರರು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಮೇಲೆ ಇಟ್ಟಿರುವ ಪ್ರೀತಿ, ಅಭಿಮಾನವನ್ನು ನಮ್ಮ ಕುಟುಂಬ ಎಂದಿಗೂ ಮರೆಯಲು ಸಾಧ್ಯವಿಲ್ಲ. ಖಾಸಗಿ ಶಾಲೆಗಳಿಗೆ ಸಮಾನವಾದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೂ ಸಿಗಬೇಕು. ರೈತರ ಜೀವನ ಮಟ್ಟ ಸುಧಾರಣೆಯಾಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗಬೇಕು ಎಂಬಿತ್ಯಾದಿ ಪ್ರಮುಖ ಅಂಶಗಳಿಗೆ ಪ್ರಮುಖ ಆದ್ಯತೆ ನೀಡಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೆಲಸ ಮಾಡುತ್ತಿದ್ದಾರೆ. ಜತೆಗೆ ಕ್ಷೇತ್ರಕ್ಕೆ ಕೋಟ್ಯಂತರ ರೂ. ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ತಾಯಿ ಚಾಮುಂಡೇಶ್ವರಿ ಆಯಸ್ಸು, ಆರೋಗ್ಯ ದಯಪಾಲಿಸಲಿ ಎಂದು ಹಾರೈಸಿದರು.

ದರ್ಶನ್‌ಪುಟ್ಟಣ್ಣಯ್ಯ ಹುಟ್ಟುಹಬ್ಬದ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಅಭಿಮಾನಿಗಳು ಕಟೌಟ್, ಬ್ಯಾನರ್ ಅಳವಡಿಸುವ ಜತೆಗೆ ತಾಲೂಕಿನ ಪ್ರಮುಖ ವೃತ್ತ ಕೇಂದ್ರದಲ್ಲಿ ಪಟಾಕಿ ಸಿಡಿಸಿ ಸಿಹಿ ವಿತರಿಸಿ, ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದರು.

ರೈತಸಂಘ ತಾಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್, ಮಾಜಿ ಅಧ್ಯಕ್ಷ ಚಿಕ್ಕಾಡೆ ಹರೀಶ್, ಕಾರ್ಯದರ್ಶಿ ವೈ.ಪಿ.ಮಂಜು, ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಎಸ್.ದಯಾನಂದ್, ಮುಖಂಡರಾದ ರಾಘವ ಪ್ರಕಾಶ್, ಚಿಕ್ಕಾಡೆ ಸಿ.ಎನ್.ವಿಜೇಂದ್ರ, ಹರಳಹಳ್ಳಿ ಚಿಟ್ಟಿಬಾಬು, ಉದ್ಯಮಿ ಮಹೇಶ್, ಕೋಟಿ ಶಂಕರ, ಗುತ್ತಿಗೆದಾರ ಹರ್ಷವರ್ಧನ್, ಇಂಗಲಗುಪ್ಪೆ ಅಶ್ವಥ್, ಸ್ವಾಮಿಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net