ದರ್ಶನ್ ಗೆ ಸಚಿವ ಸ್ಥಾನ ನೀಡಲು ಅಭಿಮಾನಿಗಳ ಆಗ್ರಹ

Published on

ಮೈಸೂರು: ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕ್ಷೇತ್ರದ ದಲಿತ ಸಮುದಾಯದ ಮುಖಂಡರು ಮನವಿ ಮಾಡಿದರು.

ಪ್ರಥಮ ಬಾರಿಗೆ ಶಾಸಕರಾಗಿದ್ದರೂ ದರ್ಶನ್ ಅವರ ತಂದೆ ಧ್ರುವನಾರಾಯಣ ಅವರ ಹಾದಿಯಲ್ಲಿ ಸಾಗಿ ಪಕ್ಷ ಸಂಘಟನೆಯಲ್ಲಿ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಸಚಿವ ಸ್ಥಾನ ನೀಡುವ ಮೂಲಕ ಅವರಿಗೆ ಪಕ್ಷ ಬಲ ತುಂಬಬೇಕು ಎಂದು ಮುಖಂಡ ವಿ.ಸಿ.ಶ್ರೀನಿವಾಸಮೂರ್ತಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಮುಖಂಡರಾದ ವಿ.ಆರ್.ವಿಜಯಕುಮಾರ್, ಮಂಜುನಾಥ್, ಹುಚ್ಚಯ್ಯ, ಪುಟ್ಟಬುದ್ಧಿ, ಜಗದೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net