ಸುಪ್ರಜಾ ಗುರುಕುಲ ಶಾಲೆಯಲ್ಲಿ ಬೀಳ್ಕೊಡುಗೆ

19ss1supraja schl students
ಸುಪ್ರಜಾ ಗುರುಕುಲ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಮತ್ತು ಶಾರದಾ ಪೂಜೆ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಪು ಧರಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು.
Published on

ಶನಿವಾರಸಂತೆ: ಇಲ್ಲಿನ ಸುಪ್ರಜಾ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆ ವತಿಯಿಂದ ಮಂಗಳವಾರ ಶಾರದಾ ಪೂಜೆಯೊಂದಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

ಹತ್ತನೇ ತರಗತಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಸಾಂಪ್ರದಾಯಿಕ ಉಡುಗೆ ತೊಡುಗೆ ಧರಿಸಿ ಸಂಭ್ರಮಿಸಿದರು. ಸಮಾರಂಭದಲ್ಲಿ ಪಾಲಕರು ಪಾಲ್ಗೊಂಡಿದ್ದರು. ವಿದ್ಯಾಸಂಸ್ಥೆ ಪ್ರಾಂಶುಪಾಲೆ ಡಿ.ಸುಜಲಾದೇವಿ, ಶಾಲಾ ಅಧ್ಯಾಪಕರು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net