

ಕುಂದಾಪುರ: ಬಸ್ರೂರು ಹಿಂದು ಮಾದರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎಸ್.ಮಂಜುನಾಥ್ ವಯೋ ನಿವೃತ್ತಿ ಹೊಂದಿದ್ದು, ಅವರನ್ನು ಶಾಲಾ ಆಡಳಿತ ಮಂಡಳಿ, ಹಳೇ ವಿದ್ಯಾರ್ಥಿ ಸಂಘ, ನಿವೇದಿತಾ ಪ್ರೌಢ ಶಾಲೆ ವತಿಯಿಂದ ಬೀಳ್ಕೊಡಲಾಯಿತು.
ಬಸ್ರೂರು ಹಿಂದು ಸ್ಕೂಲ್ ಅಸೋಸಿಯೇಶನ್‌ನ ಆಡಳಿತ ಮಂಡಳಿ ಸದಸ್ಯೆ ಅನುಪಮಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಧ್ಯಾಪಕರಾದ ಕೊರಗಯ್ಯ ಶೆಟ್ಟಿ, ರವೀಂದ್ರನಾಥ್ ಶೆಟ್ಟಿ, ನಿವೇದಿತಾ ಪ್ರೌಢ ಶಾಲೆ ಪ್ರದೀಪ್ ಕುಮಾರ್ ಶೆಟ್ಟಿ, ಶಾಲಾ ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡರು.
ಹಿಂದು ಶಾಲೆ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ರಾಮಕಿಶನ್ ಹೆಗ್ಡೆ, ಕಾರ್ಯದರ್ಶಿ ಉಮೇಶ್ ಆಚಾರ್ಯ, ಬಸ್ರೂರು ಗ್ರಾಪಂ ಅಧ್ಯಕ್ಷ ಬೇಳೂರು ದಿನಕರ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಪೂಜಾರಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಸುಬ್ಬಣ್ಣ ಕೋಣಿ ಸ್ವಾಗತಿಸಿದರು. ಶಿಕ್ಷಕಿ ಸರೋಜಾ ಎಂ.ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜಾರಾಮ ಶೆಟ್ಟಿ ವಂದಿಸಿದರು.