

ಮಂಗಳೂರು: ದ.ಕ.ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಯಾಗಿದ್ದ ಕೆ.ಆನಂದ್ ಕುಮಾರ್ ವರ್ಗಾವಣೆಯಾಗಿದ್ದು, ನಗರದ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು.
ದ.ಕ. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಹಾಗೂ ಅಧಿಕಾರಿಗಳು ಆನಂದ ಕುಮಾರ್ ಅವರನ್ನು ಸನ್ಮಾನಿಸಿದರು. ತುಮಕೂರಿನಲ್ಲಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಘು ಎ.ಇ. ದ.ಕ.ಜಿಪಂ ಉಪ ಕಾರ್ಯದರ್ಶಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು.