

ಕುಂದಾಪುರ: ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ವಾತೃವಂದನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ವಾಗ್ಮಿ ಎನ್.ಆರ್. ದಾಮೋದರ ಶರ್ಮ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳು ಮಾತಾ-ಪಿತರ ಪಾದಪೂಜೆಗೈದರು. ಶಾಲಾ ಸಂಸ್ಥಾಪಕರ ಪತ್ನಿ ರವಾದೇವಿ ಆರ್. ಭಟ್, ಪ್ರಾಂಶುಪಾಲ ಶರಣಕುವಾರ, ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಉಪಪ್ರಾಂಶುಪಾಲ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಸದಾರಾಮ್ ಮೊದಲಾದವರಿದ್ದರು.