ಬಿಇಒ ಭಾಗ್ಯಮ್ಮ್ಮಗೆ ಬೀಳ್ಕೊಡುಗೆ

ಸೋಮವಾರಪೇಟೆ ತಾಲೂಕಿನ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಬಿಇಒ ಭಾಗ್ಯಮ್ಮ ಅವರನ್ನು ಶಿಕ್ಷಕರ ಸಂಘ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ಸನ್ಮಾನಿಸಿದರು. ಸೋಮಶೇಖರ್, ಮಲ್ಲಪ್ಪ, ತಿಲೋತ್ತಮೆ ಇದ್ದರು.
ಸೋಮವಾರಪೇಟೆ ತಾಲೂಕಿನ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಬಿಇಒ ಭಾಗ್ಯಮ್ಮ ಅವರನ್ನು ಶಿಕ್ಷಕರ ಸಂಘ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ಸನ್ಮಾನಿಸಿದರು. ಸೋಮಶೇಖರ್, ಮಲ್ಲಪ್ಪ, ತಿಲೋತ್ತಮೆ ಇದ್ದರು.
Published on

ಸೋಮವಾರಪೇಟೆ: ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಬೇರೆಡೆ ವರ್ಗಾವಣೆಯಾದ ಎಸ್.ಭಾಗ್ಯಮ್ಮ ಅವರನ್ನು ಪಟ್ಟಣದಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಇತ್ತೀಚೆಗೆ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿದ ಬಿಇಒ ಭಾಗ್ಯಮ್ಮ ಮಾತನಾಡಿ, ಸೋಮವಾರಪೇಟೆ ತಾಲೂಕಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಿದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾದದ್ದು ತೃಪ್ತಿ ತಂದಿದೆ ಎಂದರು.

ನನ್ನ ಸೇವಾವಧಿಯಲ್ಲಿ ಉತ್ತಮ ಶೈಕ್ಷಣಿಕ ಕಾರ್ಯಕ್ಕೆ ಸಹಕರಿಸಿದ ಶಿಕ್ಷಕರು ಹಾಗೂ ಕಚೇರಿ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನೂತನ ಬಿಇಒ ಎಂ.ಕೃಷ್ಣಪ್ಪ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿ, ತಾಲೂಕಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶಾಲೆಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗುವುದು. ಈ ಹಿಂದೆ ತಾಲೂಕಿನಲ್ಲಿ ಕೈಗೊಂಡ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಯೋಜನೆಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ವಿಶೇಷ ಗಮನ ನೀಡಲಾಗುವುದು ಎಂದರು.

ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್, ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ನಿವೃತ್ತ ಉಪನ್ಯಾಸಕಿ ಎಂ.ಬಿ.ತಿಲೋತ್ತಮೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net