ದಸರಾ ಗಜಪಡೆಗೆ ಬೀಳ್ಕೊಡಿಗೆ

Dasara Elephant
Published on

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯನ್ನ ಯಶಸ್ವಿಯಾಗಿ ನಡೆಸಿದ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಕಾಡಿನತ್ತ ಹೆಜ್ಜೆ ಹಾಕಿದವು.

ಇಂದು ಅರಣ್ಯ ಇಲಾಖೆಯಿಂದ ದಸರಾ ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ ನೀಡಲಾಯಿತು. ಕ್ಯಾಫ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಯಶಸ್ವಿಯಾಗಿ ದಸರಾ ಮುಗಿಸಿದ ಬಳಿಕ ಇದೀಗ ಸ್ವಸ್ಥಾನಕ್ಕೆ ವಾಪಾಸಾದವು. ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ರಾಜವಂಶಸ್ಥ ಯದುವೀರ್ ಭಾಗವಹಿಸಿದ್ದರು.

ಕರೊನಾ ಹಿನ್ನೆಲೆ ಈ ಬಾರಿ ಸರಳ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿದ್ದು ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಸೀಮಿತವಾಗಿತ್ತು. ಹೀಗಾಗಿ ಕ್ಯಾಪ್ಟನ್ ಅಭಿಮನ್ಯು ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದನು. ಈ ಬಾರಿ 400 ಮೀಟರ್ ಗಷ್ಟೇ ಜಂಬೂ ಸವಾರಿ ಮೆರವಣಿಗೆ ಸೀಮಿತವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net