ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

14.npk-1
ವಿರಾಜಪೇಟೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಪಾಲಕರು ಸಭೆ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
Published on

ನಾಪೋಕ್ಲು: ವಿರಾಜಪೇಟೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಗುರುವಾರ ಪಾಲಕರ ಸಭೆ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಮೊಹಮ್ಮದ್ ರಾಫಿ ಮಾತನಾಡಿ, ಸರ್ಕಾರದ ಉತ್ತಮ ಯೋಜನೆಗಳನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು. ಪಾಲಕರು ಹೆಣ್ಣು ಮಕ್ಕಳನ್ನು ಬೇಗನೆ ವಿವಾಹ ಮಾಡದೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ, ಉನ್ನತ ಸ್ಥಾನಕ್ಕೇರಲು ಸಹಕರಿಸಬೇಕೆಂದು ಕಿವಿಮಾತು ಹೇಳಿದರು.

ಗೋಣಿಕೊಪ್ಪ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನಿರ್ಮಲಾ ಬಿ.ಎಂ, ನಿಲಯದ ಶಿಕ್ಷಕಿ ತ್ರಿವೇಣಿ, ವಾರ್ಡನ್ ಸುಮಯ್ಯ ಇದ್ದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 10ನೇ ತರಗತಿ ವಿದ್ಯಾರ್ಥಿಗಳಿಗೆ ಕಿರುಕಾಣಿಕೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net