

ನಾಪೋಕ್ಲು: ಸಮೀಪದ ಚೇರಂಬಾಣೆ ಕೋಪಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಎನ್.ಜಯಂತಿ ಅವರಿಗೆ ಶಾಲಾ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ 29 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ ವಯೋ ನಿವೃತ್ತಿ ಹೊಂದಿರುವ ಜಯಂತಿ ಅವರನ್ನು ಕಾರ್ಯಕ್ರಮದಲ್ಲಿದ್ದ ಗಣ್ಯರು ಗುಣಗಾನ ಮಾಡಿ, ಫಲತಾಂಬೂಲ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಸದಸ್ಯರಾದ ಮೀನಾಕ್ಷಿ, ಶಾಂತಿ, ನಂದಕುಮಾರ್ ಹಾಗೂ ನಿವತ್ತ ಶಿಕ್ಷಕಿಯವರಾದ ಡಿ.ಕೆ.ಶಾಂತ ಹಾಗೂ ದಾಯನ ಸರೋಜ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ನಿಶಾ ಇದ್ದರು.