ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ
Published on

ಸೋಮವಾರಪೇಟೆ: ತಾಲೂಕಿನ ಕಾಜೂರು ಕ್ಲಸ್ಟರ್ ವತಿಯಿಂದ ಇತ್ತೀಚೆಗೆ ವಿವಿಧ ಶಾಲೆಗಳಿಗೆ ವರ್ಗಾವಣೆಗೊಂಡ ಶಿಕ್ಷಕರನ್ನು ಶನಿವಾರ ಬೀಳ್ಕೊಡಲಾಯಿತು.

ತಾಲೂಕಿನ ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಶಿಕ್ಷಕರಾದ ಐಗೂರು ಸರ್ಕಾರಿ ಪ್ರೌಢಶಾಲೆಯ ಎಸ್.ಕೆ.ರಾಜರತ್ನ, ಕಿರಗಂದೂರು ಸರ್ಕಾರಿ ಪ್ರೌಢಶಾಲೆಯ ವಿಜಯಕುಮಾರ್, ಕಾಜೂರು ಸರ್ಕಾರಿ ಪ್ರಾಥಮಿಕ ಶಾಲೆಯ ಭಾರತಿ ಹಾಗೂ ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರುಗಳಾದ ಮಮತಾ, ನಿರ್ಮಲಾ, ವನಜಾ ಅವರಿಗೆ ಕ್ಲಸ್ಟರ್ ವತಿಯಿಂದ ಬೀಳ್ಕೊಡಲಾಯಿತು.

ಅಧ್ಯಕ್ಷತೆಯನ್ನು ಐಗೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಎಂ.ಯಶ್ವಂತ್‌ಕುಮಾರ್ ವಹಿಸಿದ್ದರು. ಯಡವನಾಡು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುಳಾ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಚಿನ್, ಸಿಆರ್‌ಪಿ ಗಿರೀಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net