ಕೃಷಿ ಕಾಯ್ದೆ ತಿದ್ದುಪಡಿ ಮಾಡಿ ಮರು ಮಂಡನೆ ಸಾಧ್ಯತೆ: ಸಚಿವ ಕೋಟ

images
Published on

ಉಡುಪಿ: ಕೇಂದ್ರ ಸರಕಾರ ಕೃಷಿ ಕಾಯ್ದೆ ಬಗ್ಗೆ ಅಧ್ಯಯನ ಮಾಡಿ ಮಂಡನೆ ಮಾಡುವ ಸಾಧ್ಯತೆ ಇದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿಕರ ಪರವಾಗಿ ಕೇಂದ್ರ ಸರ್ಕಾರ ಕಾಯ್ದೆಯನ್ನು ರೂಪಿಸಿದ್ದು ಆರ್ಥಿಕ ಶಕ್ತಿ ನೀಡುವ ಉದ್ದೇಶ ಹೊಂದಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಸಹಜ. ಸರ್ಕಾರ ಪ್ರತಿಭಟನಾಕಾರರಿಗೆ ಮಣಿದಿದೆ ಎಂಬುದು ಸರಿಯಲ್ಲ. ಹೀಗಾಗಿ ಕಾಯ್ದೆಗೆ ಮತ್ತಷ್ಟು ತಿದ್ದುಪಡಿ ತಂದು ಮರು ಮಂಡನೆ ಮಾಡಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net