ವಿಷ ಸೇವಿಸಿ ರೈತ ಆತ್ಮಹತ್ಯೆ

Farmer Sucide
Published on

ಹಿರೇಕೆರೂರ: ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಾತೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಾಂತಪ್ಪ ಚನ್ನಬಸಪ್ಪ ಕೂಡಲದವರ (62) ಆತ್ಮಹತ್ಯೆ ಮಾಡಿಕೊಂಡ ರೈತ. ಶಾಂತಪ್ಪ ತನ್ನ ಜಮೀನಿನಲ್ಲಿ ಕೃಷಿ ಚಟುವಟಿಕೆಗಾಗಿ ಕೆನರಾ ಬ್ಯಾಂಕ್‌ನಲ್ಲಿ 10 ಲಕ್ಷ ರೂಪಾಯಿ, ಸೊಸೈಟಿಯಲ್ಲಿ 50 ಸಾವಿರ ರೂಪಾಯಿ ಸೇರಿದಂತೆ 10.50 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎನ್ನಲಾಗಿದೆ. ಜಮೀನಿನಲ್ಲಿ ಎರಡು ಬೊರವೆಲ್ ಕೊರೆಸಿದ್ದು, ಅದರಲ್ಲಿ ನೀರು ಸಿಕ್ಕಿರಲಿಲ್ಲ. ಹಿಂದಿನ ವರ್ಷ ಬೆಳೆ ಕೈಕೊಟ್ಟಿದ್ದರಿಂದ ಮಾಡಿದ ಸಾಲ ಹೇಗೆ ತೀರಿಸಬೇಕು ಎಂದು ಮನನೊಂದು ತನ್ನ ಮನೆಯಲ್ಲಿ ಜು. 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಶಾಂತಪ್ಪನನ್ನು ಹಿರೇಕೆರೂರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ, ನಂತರ ಅಲ್ಲಿಂದ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಜು. 18ರಂದು ರಾತ್ರಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ತಾಲೂಕಿನ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net