ವಿಷ ಸೇವಿಸಿ ರೈತ ಆತ್ಮಹತ್ಯೆ

29-nvl suicide
Published on

ನವಲಗುಂದ: ಪಟ್ಟಣದ ವಿನಾಯಕಪೇಟೆಯ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುರಾಜ ತ್ರಿಯಂಬಕ ಹೆಬಸೂರ (63) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತರು ಕೆವಿಜಿ ಬ್ಯಾಂಕ್​ನಲ್ಲಿ 8 ಲಕ್ಷ ರೂ. ಹಾಗೂ ಪಿಎಲ್​ಡಿ ಬ್ಯಾಂಕ್​ನಲ್ಲಿ ಕುರಿ ಸಾಕಾಣಿಕೆಗಾಗಿ 1.50 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net