ಜಮೀನಿನಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲ್ಲತ್ತಿ ತಾಂಡಾದಲ್ಲಿ ಬುಧವಾರ ನಡೆದಿದೆ.

ರಾಮಪ್ಪ ಠಾಕಪ್ಪ ಲಮಾಣಿ (58) ಮೃತ ರೈತ.

ಇವರು 5.20 ಎಕರೆ ಜಮೀನು ಹೊಂದಿದ್ದು ಬ್ಯಾಂಕ್​ ಹಾಗೂ ವಿವಿಧ ಸಂಘಗಳಲ್ಲಿ ಸೇರಿ 6.80 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿತ್ತು. ಇದರಿಂದ ಬೇಸತ್ತು ಜಮೀನಿನಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net