

ಬಂಕಾಪುರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಹೋತನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಮಲ್ಲೇಶ ಮಾರತೇಪ್ಪ ತಳವಾರ (34) ಮೃತ ರೈತ.
ಇವರು ಕೃಷಿಗಾಗಿ 3.80 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಗೋವಿನಜೋಳ ಬೆಳೆ ಸಂರ್ಪೂಣ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.