

ಆಲೂರು: ತಾಲೂಕಿನ ಮುದಿಗೆರೆ ಗ್ರಾಮದಲ್ಲಿ ಶುಕ್ರವಾರ ಸಾಲಬಾಧೆ ತಾಳಲಾರದೆ ರೈತನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ರೈತ ತಮ್ಮಣ್ಣ(64) ಆತ್ಮಹತ್ಯೆ ಮಾಡಿಕೊಂಡವರು. ಕಂದಲಿ ಯೂನಿಯನ್ ಬ್ಯಾಂಕ್‌ನಲ್ಲಿ 2.5 ಲಕ್ಷ ರೂ.,ಭೂಮಿ ಅಭಿವೃದ್ಧಿಗಾಗಿ 2.5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಮನನೊಂದು ಶುಕ್ರವಾರ ರಾತ್ರಿ ಗ್ರಾಮ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಶನಿವಾರ ಆಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಶವವನ್ನು ಹೊರ ತೆಗೆದು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರ ವಶಕ್ಕೆ ನೀಡಲಾಯಿತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.