ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ರೈತ ಆತ್ಮಹತ್ಯೆ

ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಕಂದಾಯ ಇಲಾಖೆ ಶಿರಸ್ತೇದಾರ್ ಸಿ.ಸ್ವಾಮಿ, ಗ್ರಾಮ ಆಡಳಿತಾಧಿಕಾರಿ ಮೋಹನ್ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು. ಬಿಎಸ್‌ಪಿ ಜಿಲ್ಲಾಧ್ಯಕ್ಷ ಅತ್ನಿ ಹರೀಶ್ ಇದ್ದರು.
ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಕಂದಾಯ ಇಲಾಖೆ ಶಿರಸ್ತೇದಾರ್ ಸಿ.ಸ್ವಾಮಿ, ಗ್ರಾಮ ಆಡಳಿತಾಧಿಕಾರಿ ಮೋಹನ್ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು. ಬಿಎಸ್‌ಪಿ ಜಿಲ್ಲಾಧ್ಯಕ್ಷ ಅತ್ನಿ ಹರೀಶ್ ಇದ್ದರು.
Published on

ಅರಕಲಗೂಡು: ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ಮೈಕ್ರೊ ಫೈನಾನ್ಸ್ ಕಿರುಕುಳ ತಾಳಲಾರದೆ ರೈತರೊಬ್ಬರು ಮಂಗಳವಾರ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಕೇಶವಯ್ಯ (61) ಮೃತರು. ಇವರು ವ್ಯವಸಾಯಕ್ಕಾಗಿ ಹಾಗೂ ಮನೆಕಟ್ಟಲು ಖಾಸಗಿ ಮೈಕ್ರೊ ಫೈನಾನ್ಸ್ ಕಂಪನಿ, ಬ್ಯಾಂಕ್ ಮತ್ತು ಕೈಸಾಲ ಮಾಡಿದ್ದರು. ಕಳೆದ ವರ್ಷ ಅತಿವೃಷ್ಟಿ ಪರಿಣಾಮ ಬೆಳೆದಿದ್ದ ಬೆಳೆ ಹಾನಿಯಾಗಿತ್ತು. ಎರಡು ಸಾಲದ ಕಂತುಗಳನ್ನು ಮರುಪಾವತಿಸದ ಕಾರಣಕ್ಕೆ ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲ ವಾಪಸ್ ಮಾಡುವಂತೆ ಒತ್ತಡ ಹೇರಿ, ಮನೆ ಹರಾಜು ಹಾಕುವುದಾಗಿ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಪೊಲೀಸರಿಗೆ ನಿಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಂದಾಯ ಇಲಾಖೆ ಶಿರಸ್ತೇದಾರ್ ಸಿ.ಸ್ವಾಮಿ, ಗ್ರಾಮ ಆಡಳಿತಾಧಿಕಾರಿ ಮೋಹನ್ ನಾಯಕ್ ಮೃತರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಶೀಘ್ರವಾಗಿ ದೊರಕಿಸಲು ಕ್ರಮಕೈಗೊಳ್ಳುವುದಾಗಿ ಹೇಳಿದರು.

ತನಿಖೆಗೆ ಅಗ್ರಹ: ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಬಿಎಸ್‌ಪಿ ಅಧ್ಯಕ್ಷ ಅತ್ನಿ ಹರೀಶ್ ಮೈಕ್ರೋ ಫೈನಾನ್ಸ್‌ನವರ ಕಿರುಕುಳದಿಂದ ಬೇಸತ್ತು ಕೇಶವಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ತಿಂಗಳು ಹಣ ಕಟ್ಟಲು ತಡವಾಗಿದ್ದಕ್ಕೆ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿರುವುದಲ್ಲದೆ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ತಾಲೂಕು ಆಡಳಿತ ಈ ಬಗ್ಗೆ ತನಿಖೆ ನಡೆಸಿ ಮೈಕ್ರೋ ಫೈನಾನ್ಸ್ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿ ಕುಟುಂಬಸ್ಥರಿಗೆ ನ್ಯಾಯ ದೊರಕಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net