ಹೆಡಿಗ್ಗೊಂಡ ಗ್ರಾಮದಲ್ಲಿ ರೈತ ಆತ್ಮಹತ್ಯೆ

Former death
Published on

ಬ್ಯಾಡಗಿ: ಸಾಲಭಾದೆಯಿಂದ ರೈತ ನೇಣಿಗೆ ಶರಣಾದ ಘಟನೆ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ಶನಿವಾರ ನಡೆದಿದೆ.

ಗ್ರಾಮದ ಶಿವನಗೌಡ ಭೀಮನಗೌಡ ಹೊಸಮನಿ (55) ಆತ್ಮಹತ್ಯೆಗೆ ಶರಣಾದ ರೈತ. ಕುರುಬಗೊಂಡ ಯೂನಿಯನ್ ಬ್ಯಾಂಕ್‌ನಲ್ಲಿ 7 ಲಕ್ಷ ರೂ., ಫೈನಾನ್ಸ್‌ನಲ್ಲಿ 7.5 ಲಕ್ಷ ರೂ. ಸಾಲಮಾಡಿರುವುದಾಗಿ ತಿಳಿದು ಬಂದಿದೆ. ಮುಂಗಾರು ಮಳೆ ಕೊರತೆಯಿಂದ ಕಬ್ಬಿನ ಬೆಳೆ ಒಣಗಿದ ಪರಿಣಾಮ ಸಾಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net