ನೇಣು ಹಾಕಿಕೊಂಡು ರೈತ ಆತ್ಮಹತ್ಯೆ

HULLAPPA MOODUR DEATH
Published on

ಹಾನಗಲ್ಲ: ರೈತನೊಬ್ಬ ನೇಣು ಹಾಕಿಕೊಂಡು ಸಾವಿಗೆ ಶರಣಾದ ಘಟನೆ ತಾಲೂಕಿನ ಕ್ಯಾಸನೂರ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ಹುಲ್ಲಪ್ಪ ಸಿದ್ದಪ್ಪ ಮೂಡೂರ(50) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಚಿಕ್ಕಾಂಶಿ ಹೊಸೂರ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ 1.50 ಲಕ್ಷ ರೂ., ಹಾಗೂ ಸ್ಥಳೀಯ ಧರ್ಮಸ್ಥಳ ಸಂಘದಲ್ಲಿ ಕೈಗಡ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಕೆಲವು ವರ್ಷಗಳಿಂದ ಹೊಲದಲ್ಲಿ ಸರಿಯಾಗಿ ಬೆಳೆ ಬಂದಿರಲಿಲ್ಲ. ಹೀಗಾಗಿ ಸಾಲ ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಮನನೊಂದು ಗ್ರಾಮದ ಹೊರಭಾಗದ ಕೆಂಗನಕಟ್ಟಿ ಕೆರೆಯ ದಂಡೆಯಲ್ಲಿ ಗಿಡವೊಂದಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net