ನೇಣು ಬಿಗಿದುಕೊಂಡು ಆತ್ಮಹತ್ಯೆ

Published on

ರಾಣೆಬೆನ್ನೂರ: ವಿಪರೀತ ಮದ್ಯ ಸೇವನೆಗೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ನೆಹರು ಮಾರುಕಟ್ಟೆಯಲ್ಲಿ ಸೋಮವಾರ ನಡೆದಿದೆ. ಮೂಲಹ ಕುಂದಗೋಳ ತಾಲೂಕಿನ ಗೌಡಗೇರಿ ಗ್ರಾಮದ, ನಗರದ ಕುರುಬಗೇರಿಯ ನಿಂಗಪ್ಪ ಫಕೀರಪ್ಪ ಕಂಬಳಿ (38) ಆತ್ಮಹತ್ಯೆ ಮಾಡಿಕೊಂಡವರು. ತರಕಾರಿ ಮಾರುಕಟ್ಟೆಯಲ್ಲಿ ಹಮಾಲಿ ಕೆಲಸ ಮಾಡಿಕೊಂಡಿದ್ದ ಇವರು, ಇತ್ತೀಚೆಗೆ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net