

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೊಲ್ಲಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ದಾನಪ್ಪ ರೇವಣೆಪ್ಪ ಬ್ಯಾಡಗಿ (42) ಮೃತ ರೈತ.
ಇವರು ಸಹಕಾರಿ ಸಂಘದಲ್ಲಿ 95 ಸಾವಿರ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.