ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಲಿಂಗದಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

ನಾಗರಾಜ ಬಸವಣ್ಣೆಪ್ಪ ಮಾಗನೂರ (28) ಮೃತ ರೈತ.

ಇವರು ಬ್ಯಾಂಕ್​ ಹಾಗೂ ಖಾಸಗಿ ಫೈನಾನ್ಸ್​ಗಳಲ್ಲಿ 3.35 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಸಂರ್ಪೂಣ ಹಾಳಾಗಿ ಹೋಗಿದ್ದವು. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net