ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime Logo
Published on

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಾಗಲಾಮರ ಗ್ರಾಮದಲ್ಲಿ ನಡೆದಿದೆ.

ವೀರಪ್ಪ ಸಂಕಣ್ಣನವರ ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್​ ಹಾಗೂ ವಿವಿಧ ಸಂಘಗಳಲ್ಲಿ 8 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅತಿಯಾದ ಮಳೆಯಿಂದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net