ಹೃದಯಾಘಾತದಿಂದ ಕುಸಿದು ಬಿದ್ದು ರೈತ ಮೃತ್ಯು

death
Published on

ಹೆಬ್ರಿ: ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ರಮೇಶ (45) ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಅವರಿಗೆ ಹೃದಯದ ಸಮಸ್ಯೆ ಇದ್ದು, ಕೆಲವರ್ಷದ ಹಿಂದೆ ಹೃದಯದ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಗದ್ದೆಯಲ್ಲಿ ಕೆಲಸ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದವರನ್ನು ಚಿಕಿತ್ಸೆಗಾಗಿ ಹೆಬ್ರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರೀಕ್ಷಿಸಿದ ವೈದ್ಯರು ರಮೇಶ ಅವರು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net