ಲಾರಿ ಹರಿದು ರೈತ ಸ್ಥಳದಲ್ಲೇ ಸಾವು: ಬಸರಾಳು ಗ್ರಾಮದಲ್ಲಿ ದುರಂತ

Crime.jpg
Published on
ಮಂಡ್ಯ: ತಾಲೂಕಿನ ಬಸರಾಳು ಗ್ರಾಮದಲ್ಲಿ ಲೋಡ್ ಲಾರಿ ಹರಿದು ರೈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತಾಲೂಕಿನ ಕೋಡಿಕೊಪ್ಪಲು ಗ್ರಾಮದ ರಾಜು(62) ಮೃತ ದುರ್ದೈವಿ. ಈತ ಕಾರ್ಯನಿಮಿತ್ತ ಬಸರಾಳು ಗ್ರಾಮಕ್ಕೆ ಆಗಮಿಸಿದ್ದರು. ಅಂತೆಯೇ ಕೊಪ್ಪ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಲಾರಿ ಹರಿದಿದೆ. ಪರಿಣಾಮ ತಲೆ, ಕೈ ಕಾಲು ಸೇರಿದಂತೆ ಸಂಪೂರ್ಣ ದೇಹ ಛಿದ್ರಗೊಂಡು ನೋಡಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಮಧ್ಯಪ್ರದೇಶ ನೋಂದಣಿಯ ಲಾರಿಯನ್ನು ಬಸರಾಳು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಛಿದ್ರಗೊಂಡಿದ್ದ ಶವವನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ರವಾನಿಸಲಾಯಿತು. ಘಟನೆ ಸಂಬಂಧ ಬಸರಾಳು ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net