ವಿದ್ಯುತ್ ಪ್ರವಹಿಸಿ ರೈತ ಸಾವು

24 krp 01
Published on

ಕೆ.ಆರ್.ಪೇಟೆ : ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಕಟ್ಟೆಕ್ಯಾತನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಜಾನುವಾರುಗಳಿಗೆ ಮೇವು ಕೊಯ್ಯುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಗುರುವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ತಾಲೂಕಿನ ರಾಜೇನಹಳ್ಳಿ ಗ್ರಾಮದ ಪ್ರಗತಿಪರ ರೈತ ರವಿಕುಮಾರ್ (43) ಮೃತರು. ರವಿಕುಮಾರ್ ಕಟ್ಟೆಕ್ಯಾತನಹಳ್ಳಿ ಬಳಿ ಇರುವ ತಮ್ಮ ಜೀಮೀನಿನಲ್ಲಿ ಹುಲ್ಲು ಕೊಯ್ಯಲು ತೆರಳಿದ್ದ ಸಮಯದಲ್ಲಿ ಟಿಸಿಯಿಂದ ವಿದ್ಯುತ್ ತಂತಿ ತುಂಡಾಗಿರುವುದನ್ನು ಗಮನಿಸದೆ ಭತ್ತದ ಗದ್ದೆಯ ಬದುವಿನ ಮೇಲೆ ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಕುಟುಂಬದವರು ಹುಡುಕಿಕೊಂಡು ಜಮೀನಿನ ಬಳಿ ಬಂದಾಗ ರವಿಕುಮಾರ್ ಮೃತಪಟ್ಟಿರುವುದು ಕಂಡು ಬಂದಿದೆ. ಈ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net