

ತೂಬಗೆರೆ : ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಚೆನ್ನಾಪುರದಲ್ಲಿ ಉಳುಮೆ ಮಾಡುವಾಗ ಟ್ರಾ$್ಯಕ್ಟರ್ ಮುಗುಚಿಬಿದ್ದು, ರೈತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗ್ರಾಮದ ನಿವಾಸಿ ಚಂದ್ರಪ್ಪ (50) ಮೃತ. ಮುಂಗಾರು ಪ್ರಾರಂಭವಾಗಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಮಂಗಳವಾರ ಜಮೀನಿನಲ್ಲಿ ಉಳುಮೆ ಮಾಡುವಾಗ ನಿಯಂತ್ರಣ ತಪ್ಪಿದ ಟ್ರಾ$್ಯಕ್ಟರ್ ಪಲ್ಟಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಇದ್ದಾರೆ. ಕುಟುಂಬಸ್ಥರ ಆಕ್ರಂದ ಮುಗಿಲುಮುಟ್ಟಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.