ಹೃದಯಾಘಾತದಿಂದ ರೈತ ಸಾವು

UPPARA VENKATESH
UPPARA VENKATESH
Published on

ರಾಯಚೂರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ಡಿ.ರಾಂಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಉಪ್ಪಾರ ವೆಂಕಟೇಶ( 45) ಮೃತಪಟ್ಟ ರೈತ.

ಮೃತ ವೆಂಕಟೇಶ್ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ. ಆರೋಗ್ಯವಾಗಿದ್ದರು. ಜಮೀನಿನ ಕೆಲಸಗಳನ್ನು ಮಾಡಿಕೊಂಡಿದ್ದರು.

ಆದರೆ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಗ್ರಾಮದಲ್ಲಿ ಅಚ್ಚರಿ ಮೂಡಿಸಿದೆ. ಜಿಲ್ಲೆಯಲ್ಲಿ ಜು.6 ರಂದು ಮಸ್ಕಿಯಲ್ಲಿ ಯುವಕ ಶರಣಬಸವ (32) ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net