

ಹಿರೇಕೆರೂರ: ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಹಾವು ಕಚ್ಚಿದ ಪರಿಣಾಮ ರೈತ ಮೃತಪಟ್ಟ ಘಟನೆ ತಾಲೂಕಿನ ಹೊಲಬಿಕೊಂಡ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ಪಟ್ಟಣದ ಬಸವೇಶ್ವರ ನಗರದ ನಿವಾಸಿ, ಟಿಎಪಿಸಿಎಂಎಸ್ ಮಾಜಿ ವ್ಯವಸ್ಥಾಪಕ ಮಲ್ಲೇಶಪ್ಪ ಸಿದ್ದಲಿಂಗಪ್ಪ ಕೋರಿಗೌಡ್ರ(65) ಮೃತಪಟ್ಟ ರೈತ. ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಹಾವು ಕಚ್ಚಿದೆ. ಕೂಡಲೆ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮಾರ್ಗದಲ್ಲಿಯೇ ಮೃತಪಟ್ಟಿದ್ದಾರೆ. ಹಿರೇಕೆರೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.