ಆಹಾರ ಉತ್ಪಾದನೆಯಲ್ಲಿ ಗಣನೀಯ ಅಭಿವೃದ್ಧಿ

web 4
Published on

ಮೂಡಿಗೆರೆ: ಭಾರತ ವಾಣಿಜ್ಯ ಕೃಷಿ, ಆಧುನಿಕ ತಂತ್ರಜ್ಞಾನ ಮತ್ತು ರೈತರ ನಿರಂತರ ಪರಿಶ್ರಮದಿಂದ ಆಹಾರ ಉತ್ಪಾದನೆಯಲ್ಲಿ ಗಣನೀಯವಾಗಿ ಅಭಿವೃದ್ಧಿಯಾಗಿ ಆಹಾರ ಕೊರತೆ ನೀಗಿಸಲು ಯಶಸ್ವಿಯಾಗಿದೆ ಎಂದು ತೋಟಗಾರಿಕೆ ಮಹಾವಿದ್ಯಾಲಯದ ಮುಖ್ಯಸ್ಥ ಡಾ.ನಾರಾಯಣ ಮಾವರಕರ್ ತಿಳಿಸಿದರು.

ಶನಿವಾರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯ, ಮೂಡಿಗೆರೆ ತೋಟಗಾರಿಕೆ ಮಹಾವಿದ್ಯಾಲಯ, ಆತ್ಮ ಯೋಜನೆ, ಕೃಷಿ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ದೇಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2014ರ ಪ್ರಕಾರ ನಮ್ಮ ದೇಶದ ಆಹಾರ ಉತ್ಪಾದನೆ 264.77 ಮೆಟ್ರಿಕ್ ಟನ್ ಇದೆ. ಈ ಉತ್ಪಾದನೆಯನ್ನು ಮುಂದಿನ ದಿನಗಳಲ್ಲಿ ಮುಂದುವರಿಸಲು ರೈತರಿಗೆ ಕೃಷಿಯಲ್ಲಿ ವೈಜ್ಞಾನಿಕ ಮಾಹಿತಿ ಒದಗಿಸುವುದು ಅಗತ್ಯವಿದೆ. ಹಾಗಾಗಿ ಖಾಸಗಿ ಕೃಷಿ ಪರಿಕರಗಳ ಸಂಸ್ಥೆಗಳು, ರೈತರ ಸಂಘಟನೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಕೃಷಿ ಪರಿಕರಗಳ ಮಾರಾಟಗಾರರನ್ನು ವಿಸ್ತರಣೆ ಅಡಿಯಲ್ಲಿ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net