ರೈತರ ಹಿತಕ್ಕಾಗಿ ಶ್ರಮಿಸಿದ ಡಾ.ಬಾಬು ಜಗಜೀವನರಾಮ್

05 Ylb 01
ಯಲಬುರ್ಗಾದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಪ್ರಮುಖರಾದ ಡಾ.ಶಿವನಗೌಡ ದಾನರಡ್ಡಿ, ಶರಣಪ್ಪ ಗಾಂಜಿ, ಹನುಮೇಶ ಕಡೆಮನಿ, ಮಲ್ಲು ಜಕ್ಕಲಿ, ಸೀನಪ್ಪ ನಾಯ್ಕ, ಶರಣಗೌಡ ಬಸಾಪುರ ಇದ್ದರು.
Published on

ಯಲಬುರ್ಗಾ: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ವಿಚಾರಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ತಾಲೂಕು ವಕ್ತಾರ ಡಾ.ಶಿವನಗೌಡ ದಾನರಡ್ಡಿ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಗಜೀವನ್ ರಾಮ್ ಅವರು ಸ್ವಾತಂತ್ರೃ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದವರು. ಅತ್ಯುತ್ತಮ ಸಂಸದೀಯ ಪಟುವಾಗಿದ್ದು, ದೇಶದ ಉಪಪ್ರಧಾನಿಯಾಗಿ ರೈತರಿಗೆ ಅನೇಕ ಜನಪರ ಕಾರ್ಯಕ್ರಮ ಜಾರಿಗೆ ತಂದು ರೈತರ ಹಿತ ಕಾಪಾಡಿದ್ದಾರೆ ಎಂದರು.

ಬ್ಲಾಕ್ ಕಾಂಗ್ರೆಸ್‌ನ ಪ್ರಮುಖರಾದ ಶರಣಪ್ಪ ಗಾಂಜಿ, ಹನುಮೇಶ ಕಡೇಮನಿ, ಮಲ್ಲು ಜಕ್ಕಲಿ, ಸೀನಪ್ಪ ನಾಯ್ಕ, ಶರಣಗೌಡ ಬಸಾಪುರ, ಪುನೀತ್ ಕೊಪ್ಪಳ, ರಮೇಶ್ ದೇಶಪಾಂಡೆ, ರಮೇಶ ಕೊಣ್ಣೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net