ಹುಲಿ ದಾಳಿಗೆ ರೈತ ಬಲಿ

26 SARAG 4
Published on

ಸರಗೂರು : ತಾಲೂಕಿನ ಬಡಗಲಪುರ ಗ್ರಾಮದಲ್ಲಿ ರೈತ ಮಾದೇಗೌಡ ಎಂಬುವರ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ರೈತನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಂಚಿನ ನುಗು ವನ್ಯಜೀವಿ ವಲಯ ಅರಣ್ಯದಂಚಿನ ಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಣ್ಣೇಗೆರೆ ಗ್ರಾಮದ ರಾಜಶೇಖರ್(65) ಹುಲಿ ದಾಳಿಯಿಂದ ಮೃತಪಟ್ಟವರು. ರಾಜಶೇಖರ್ ಜಮೀನಿನಲ್ಲಿ ದನ ಮೇಯಿಸುವಾಗ ಹುಲಿ ಏಕಾಏಕಿ ದಾಳಿ ನಡೆಸಿ, ಕುತ್ತಿಗೆಗೆ ಬಲವಾಗಿ ಕಚ್ಚಿ 100 ಮೀ.ದೂರದವರೆಗೆ ಎಳೆದುಕೊಂಡು ಹೋಗಿದೆ. ಆದರೆ, ತಿಂದಿಲ್ಲ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದು, ರಾಜಶೇಖರ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರೈತರ ಆಕ್ರೋಶ: ಹುಲಿ ದಾಳಿಯಿಂದ ರೈತ ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೃತಕುಟುಂಬಕ್ಕೆ 30 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿದರು.

ತರಾಟೆ: ಹುಲಿ ದಾಳಿಯಿಂದ ರೈತ ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದೇ ಇದ್ದುದರಿಂದ ಆಕ್ರೋಶಗೊಂಡ ರೈತರು ಅರಣ್ಯ ಇಲಾಖೆ ಕಚೇರಿ ಬಳಿ ತಂದು ಪ್ರತಿಭಟನೆಗೆ ಮುಂದಾದರು. ಆಗ ಸ್ಥಳಕ್ಕೆ ಸರಗೂರು ಪೋಲಿಸ್ ಠಾಣೆ ಅದು ಅಧಿಕಾರಿಗಳು ತೆರಳಿ ಹುಲಿ ದಾಳಿ ಮಾಡಿದ ಸ್ಥಳ ಪರಿಶೀಲನೆ ನಡೆಸಿದರು. ನಂತರ ರೈತರು ಹಾಗೂ ಗ್ರಾಮಸ್ಥರನ್ನು ಮನವೊಲಿಸಲು ಅಧಿಕಾರಿಗಳು ಮುಂದಾದಾಗ ಮಾತಿನ ಚಕಮಕಿ ನಡೆಯಿತು. ನಂತರ ಶಾಸಕ ಅನೀಲ್ ಚಿಕ್ಕಮಾದು ಸ್ಥಳಕ್ಕಾಗಮಿಸಿ ಮಾಹಿತಿ ಪಡೆದರು. ನಂತರ ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ಮಾಡಲು ಮುಂದಾಗಿ ಸಂಬಂಧಪಟ್ಟ ಅಧಿಕಾರಿಗಳು ಬರವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಗ್ರಾಮಸ್ಥರಿಗೆ ತಿಳಿಸಿದರು.

ನಾವು ಕಣ್ಣಾರೆ ಹುಲಿ ದಾಳಿ ಮಾಡಿದ್ದನ್ನು ಕಂಡಿದ್ದೇವೆ. ಹೆಡಿಯಾಲ ಉಪ ವಲಯದ ಕಾಡಂಚಿನ ಭಾಗದಲ್ಲಿ ಹುಲಿ, ಚಿರತೆ, ಕಾಡು ಪ್ರಾಣಿಗಳಿಂದ ರಕ್ಷಣೆ ಇಲ್ಲದೆ ಪರದಾಡುತ್ತಿದ್ದಾರೆ. ಅದರೆ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ರೈತರು ಶಾಸಕರಿಗೆ ತಿಳಿಸಿದರು.

ಶಾಸಕರು ರೈತರ ಮನವೊಲಿಸಲು ಮುಂದಾದರೂ ರೈತರು ಶಾಸಕರ ಮಾತಿಗೆ ಸೊಪ್ಪು ಹಾಕದ ಹಿನ್ನೆಲೆಯಲ್ಲಿ ಸ್ಥಳದಿಂದ ನಿರ್ಗಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net