ರೈತರಿಗೆ ಮಾರಕವಾಗಿರುವ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಡಿ.7ರಂದು ವಿಧಾನಸೌಧದ ಮುಂದೆ ಬಾರಕೋಲು ಚಳವಳಿ

Farmers Protest
Published on

ರಾಯಚೂರು: ರೈತರಿಗೆ ಮಾರಕವಾಗಿರುವ ಕಾಯ್ದೆಗಳ ತಿದ್ದುಪಡಿ ಹಿಂಪಡೆಯುವಂತೆ ಒತ್ತಾಯಿಸಿ ಡಿ.7ರಂದು ವಿಧಾನಸೌಧದ ಮುಂದೆ ಬಾರಕೋಲು ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ತಿಳಿಸಿದರು.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ರೈತರು, ರೈತ ಸಂಘಟನೆಗಳು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರದ ಸ್ಪಂದನೆ ಇಲ್ಲವಾಗಿದೆ. ಆದ್ದರಿಂದ ಬಾರುಕೋಲಿನೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಸಾವಿರ ರೂ. ಪ್ರೋತ್ಸಾಹ ನೀಡಿದ್ದು, ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ರಾಜ್ಯ ಸರ್ಕಾರ ಪ್ರೋತ್ಸಾಹಧನ ನೀಡಿಲ್ಲ. ಈ ಎಲ್ಲ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುತ್ತಿದೆ ಎಂದರು.

ಸಂಘದ ಪದಾಧಿಕಾರಿಗಳಾದ ಮಹಾದೇವ ಏಗನೂರು, ನರಸಪ್ಪ ದೇವಸುಗೂರು, ಜಿ.ರಾಮಬಾಬು, ದೇವಪ್ಪ ಜೇಗರಕಲ್, ಜಂಬನಗೌಡ ಕಡಗಂದೊಡ್ಡಿ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net