ಸಹಕಾರ ಬ್ಯಾಂಕ್​ಗಳಲ್ಲಿ ರೈತರ ಸಾಲದ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಮಾಡಲು ಸರ್ಕಾರದ ನಿರ್ಧಾರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ

B S Yediyurappa 9 FEB 20
Published on

ಹುಬ್ಬಳ್ಳಿ: ಸಹಕಾರ ಬ್ಯಾಂಕುಗಳಲ್ಲಿನ ರೈತರ ಸಾಲದ ಮೇಲಿನ ಬಡ್ಡಿ ಮತ್ತು ಸುಸ್ತಿ ಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ನಿರ್ಧಾರದಿಂದಾಗಿ ರಾಜ್ಯದ ಬೊಕ್ಕಸಕ್ಕೆ 400 ಕೋಟಿ ರೂಪಾಯಿಗೂ ಅಧಿಕ ಹೊರೆಯಾಗಲಿದೆ ಎಂದರು.

ಸಚಿವ ಸಂಪುಟದ ವಿಸ್ತರಣೆ ಆಗಿದ್ದು, ಖಾತೆ ಹಂಚಿಕೆ ವಿಚಾರ ತೀರ್ಮಾನವಾಗಬೇಕಷ್ಟೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ನೂತನ ಸಚಿವರ ಖಾತೆ ಹಂಚಿಕೆ ಸೋಮವಾರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಮಹದಾಯಿ ಜಲ ವಿವಾದದ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದ್ದು, ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದ ಅವರು, ಪ್ರತ್ಯೇಕ ವಿಜಯ ನಗರ ಜಿಲ್ಲೆಯ ಬೇಡಿಕೆಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸರ್ಕಾರದ ಮುಂದೆ ವಿಜಯನಗರ ಪ್ರತ್ಯೇಕ ಜಿಲ್ಲೆ ರಚಿಸುವ ಕುರಿತ ಯಾವುದೇ ವಿಚಾರ, ಪ್ರಸ್ತಾವನೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net