

ದಾವಣಗೆರೆ: ಸಾಲಬಾಧೆ ತಾಳಲಾರದೆ ರೈತರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಗುಡ್ಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಡ್ಡೇಹಳ್ಳಿ ಗ್ರಾಮದ ಇಂದೂಧರ್ ಅಲಿಯಾಸ್ ಇಂದಪ್ಪ(62) ಮೃತ ದುರ್ದೈವಿ. ಹೊಸಕೊಪ್ಪ ಗ್ರಾಮದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಇಂದೂಧರ್ ಕೃಷಿ ಚಟುವಟಿಕೆಗಳಿಗಾಗಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಮಳೆ ಇಲ್ಲದೆ ಬೆಳೆ ಕೈಕೊಟ್ಟ ಪರಿಣಾಮ ಸಾಲಬಾಧೆ ತಾಳಲಾರದೆ ರೈತ ಇಂದೂಧರ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ನ್ಯಾಮತಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.