ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

FARMER SUCIDE
Published on

ಉಪ್ಪಿನಬೆಟಗೇರಿ: ಸಾಲಬಾಧೆಯಿಂದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೈಬನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಕಲ್ಲಪ್ಪ ಮಲ್ಲೇಶಪ್ಪ ಕುರಗುಂದ (55) ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಚಟುವಟಿಕೆಗಾಗಿ ರೈತ ಕಲ್ಲಪ್ಪ ವಿವಿಧ ಸಂಘಗಳಲ್ಲಿ ಸಾಲ ತೆಗೆದುಕೊಂಡಿದ್ದರು. ಅಲ್ಲದೆ, ತನ್ನ ಜಮೀನನ್ನು 7 ಲಕ್ಷ ರೂಪಾಯಿಗೆ ಲೀಸ್‌ಗೆ ಹಾಕಿದ್ದ. ಮಳೆಯಾಗದ ಕಾರಣ ಕೃಷಿ ಸಾಲ ತೀರಿಸಲಾಗದೆ ಹಾಗೂ ಲೀಸ್‌ನಲ್ಲಿದ್ದ ಹೊಲ ಬಿಡಿಸಿಕೊಳ್ಳಲಾಗದೆ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net