

ಶಿರಸಿ: ಸರಿಯಾಗಿ ಮಳೆ ಬಾರದಿದ್ದರಿಂದ ಕೃಷಿ ಸಾಲ ತೀರಿಸಲು ಹೆದರಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಬನವಾಸಿ ಸಮೀಪದ ಹೆಬ್ಬತ್ತಿಯಲ್ಲಿ ಸೋಮವಾರ ನಡೆದಿದೆ.
ಜಗದೀಶ್ ಚೆನ್ನಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಚಟುವಟಿಕೆಗಳಿಗಾಗಿ ಸ್ಥಳೀಯ ಪ್ರಾಥಮಿಕ ಸಂಘದಲ್ಲಿ 3 ಲಕ್ಷ ರೂ. ಸಾಲ ಮಾಡಿದ್ದರು. ಆದರೆ, ಈ ವರ್ಷ ಮಳೆ ಕೊರತೆಯಿಂದ ಫಸಲು ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.