ಸಾಲಬಾಧೆಗೆ ರೈತ ಆತ್ಮಹತ್ಯೆ

mahesh, mrutha, photo
Published on

ಕೊಳ್ಳೇಗಾಲ: ತಾಲೂಕಿನ ಸೂರಪುರ ಗ್ರಾಮದಲ್ಲಿ ಸಾಲದ ಬಾಧೆ ತಾಳಲಾರದೆ ರೈತನೊಬ್ಬ ಬಾವಿಗೆ ಬಿದ್ದು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾನೆ.

ಗ್ರಾಮದ ಕಪ್ಪಣ್ಣೇಗೌಡ ಪುತ್ರ ಮಹೇಶ್ (45) ಮೃತ. ಈತನಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. 2 ಎಕರೆ ಜಮೀನಿನಲ್ಲಿ ವ್ಯವಸಾಯ ಹಾಗೂ ಹೈನುಗಾರಿಕೆ ಮಾಡಿಕೊಂಡಿದ್ದನು. ವ್ಯವಸಾಯ ಹಾಗೂ ಹೈನುಗಾರಿಕೆಯಲ್ಲಿ ನಷ್ಟ ಹೊಂದಿದ್ದರಿಂದ ಸಾಲ ಮಾಡಿಕೊಂಡಿದ್ದ. ಹೀಗಾಗಿ ಸಾಲ ಬಾಧೆ ತಾಳಲಾರದೆ ಗ್ರಾಮದ ಪುಟ್ಟಸ್ವಾಮಿಗೌಡ ಅವರಿಗೆ ಸೇರಿದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾವಿಯ ಬಳಿ, ಕುಡುಗೋಲು ಹಾಗೂ ಚಪ್ಪಲಿ ನೋಡಿ ಮಹೇಶ್ ಬಾವಿಯೊಳಗೆ ಬಿದ್ದಿರಬಹುದೆಂದು ಶಂಕಿಸಲಾಗಿತ್ತು. ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದರು. ಅಗ್ನಿ ಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವವನ್ನು ಹೊರ ತೆಗೆದಿದ್ದಾರೆ. ನಂತರ, ಕೊಳ್ಳೇಗಾಲ ಉಪವಿಭಾಗ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.

ಈ ಸಂಬಂಧ ಮಾಂಬಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net