ವಿಷ ಸೇವಿಸಿ ರೈತ ಆತ್ಮಹತ್ಯೆ

Former Suicide
Published on

ಬ್ಯಾಡಗಿ: ತಾಲೂಕಿನ ಮೋಟೆಬೆನ್ನೂರ ಗ್ರಾಮದ ರೈತ ಫಕೀರಪ್ಪ ಮುದ್ಲಿಂಗಪ್ಪ ಬಟ್ಟಲಕಟ್ಟಿ (45) ಶನಿವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಎಕರೆ ಜಮೀನಿದ್ದು, ಹೊಲಕ್ಕೆ ಹತ್ತಿ ಹಾಗೂ ಗೋವಿನ ಜೋಳ ಬಿತ್ತನೆ ಮಾಡಿದ್ದರು. ಮೂರು ವರ್ಷಗಳಿಂದ ಸಮರ್ಪಕ ಬೆಳೆ ಬರಲಿಲ್ಲ. ಮಾಡಿಕೊಂಡ ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net