ಸಚಿವ ಕಾರಜೋಳ ಕಾರಿಗೆ ರೈತರು-ಕಾರ್ಮಿಕರಿಂದ ಘೇರಾವ್!

karajola
Published on

ಬಾಗಲಕೋಟೆ: ಜಿಲ್ಲೆಗೆ ಭೇಟಿ ನೀಡಿದ್ದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಕಾರಿಗೆ ಕಾರ್ಮಿಕರು ಮತ್ತು ರೈತರು ಘೇರಾವ್ ಹಾಕಿದ ಪ್ರಸಂಗ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಚಂದನಶಿವ ಕಾಲನಿಯಲ್ಲಿ ಈ ಘಟನೆ ನಡೆದಿದೆ.

ಇಲ್ಲಿನ ರನ್ನ ಸಕ್ಕರೆ ಕಾರ್ಖಾನೆ ಕಾರ್ಮಿಕರು ಹಾಗೂ ರೈತರು ಘೇರಾವ್ ಹಾಕಿದ್ದು, ಸಕ್ಕರೆ ಕಾರ್ಖಾನೆ ಪುನಾರಂಭ ಮಾಡಿಸುವ ಜತೆಗೆ ಕಾರ್ಮಿಕರ ವೇತನ ಬಾಕಿ ಕೊಡಿಸಲು ಆಗ್ರಹ ವ್ಯಕ್ತಪಡಿಸಿದರು. ಕಾರ್ಮಿಕರ ಕಷ್ಟ ಅರ್ಥ ಮಾಡಿಕೊಳ್ಳಿ ಎಂದು ಮನವಿ ಸಲ್ಲಿಸಿದರು.

ಘೇರಾವ್ ಹಾಕಿದ ವೇಳೆ ಜಿಲ್ಲಾಧಿಕಾರಿ ಹಾಗೂ ಆಯುಕ್ತರ ಜೊತೆ ಮಾತಾಡಿದ ಕಾರಜೋಳ, ಶೀಘ್ರದಲ್ಲಿ ಜಿಲ್ಲಾಧಿಕಾರಿ, ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಸಭೆ ಕರೆಯಲು ಸೂಚನೆ ನೀಡಿದರು. ಸಭೆಯಲ್ಲಿ ಚರ್ಚೆ ಮಾಡಿ ನಿಮ್ಮ ಸಮಸ್ಯೆ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ವಿಚಾರವಾಗಿ ಐದಾರು ತಿಂಗಳಿಂದ ಮುಧೋಳ ನಗರದಲ್ಲಿ ರನ್ನ ಕಾರ್ಖಾನೆಯ ಕಾರ್ಮಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ಸಚಿವರ ಭರವಸೆ ಹಿನ್ನೆಲೆಯಲ್ಲಿ ಕಾರ್ಮಿಕರು ಘೇರಾವ್​ನಿಂದ ಹಿಂದೆ ಸರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net