ಚರ್ಮಗಂಟು ರೋಗದಿಂದ ರೈತರಿಗೆ ಆತಂಕ

14 HANUR 2
Published on


ಚಾಮರಾಜನಗರ : ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಸಮೀಪ ಕಾಡಂಚಿನ ತೊಳಸಿಕೆರೆ ಗ್ರಾಮದಲ್ಲಿ ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರು ಕಂಗಾಲಾಗಿದ್ದಾರೆ.


ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಜಾನುವಾರುಗಳನ್ನು ಸಾಕಾಣೆ ಮಾಡುತ್ತಿದ್ದು, ಸುಮಾರು 300ಕ್ಕೂ ಹೆಚ್ಚು ಹಸುಗಳಿವೆ. ಕಳೆದ 5 ತಿಂಗಳ ಹಿಂದೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, 10ಕ್ಕೂ ಹೆಚ್ಚು ಹಸುಗಳು ಮೃತಪಟ್ಟಿದ್ದವು.

ಆದರೆ ಇದೀಗ ಮತ್ತೆ ಕೆಲವು ಹಸುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಅನಾರೋಗ್ಯದಿಂದ ಬಳಲುತ್ತಿವೆ. ಇದರಿಂದ ಇತರ ಹಸುಗಳಿಗೂ ರೋಗ ಹರಡುತ್ತಿದೆ.

ಆದರೆ ಪಶು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಗ್ರಾಮಕ್ಕೆ ಆಗಮಿಸಿ ರೋಗಕ್ಕೆ ತುತ್ತಾದ ರಾಸುಗಳಿಗೆ ಅಗತ್ಯ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಹಸುಗಳು ಸಾವು - ಬದುಕಿನ ನಡುವೆ ಹೋರಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದು ಹೀಗೆಯೇ ಮುಂದುವರಿದರೆ ಹೆಚ್ಚಿನ ಹಸುಗಳಿಗೆ ಈ ರೋಗ ಹರಡುವ ಸಾಧ್ಯತೆ ಇದೆ.


ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಇತ್ತ ಗಮನಹರಿಸಿ ಚರ್ಮಗಂಟು ರೋಗ ತಗುಲಿರುವ ಹಸುಗಳಿಗೆ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಅನುಕೂಲ ಕಲ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net