

ತೇರದಾಳ: ತಾಲೂಕಿನ ಹಳಿಂಗಳಿ ಗ್ರಾಮದ ಕೃಷಿ ಪಂಡಿತ ಪುರಸ್ಕೃತ ಡಿ.ಎನ್. ಯಲ್ಲಟ್ಟಿ ಅವರ ತೋಟದಲ್ಲಿ ಅ.27 ರಂದು ರೈತ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ.
ರೈತ ಸಮೂಹದಿಂದ ಮಾಸಿಕವಾಗಿ ನಡೆಸಲಾಗುತ್ತಿರುವ ಕಾರ್ಯಕ್ರಮಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಅವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಅವರೂ ಆಗಮಿಸಲಿದ್ದಾರೆ. ಕೃಷಿ ಹಾಗೂ ತೋಟಗಾರಿಕೆ ಸಂಬಂಧಿತ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.