

ಮೈಸೂರು: ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜು. 18ರಂದು ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಎದುರು ರೈತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಸೋಮವಾರ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಳೆದ ವರ್ಷದ ಕಬ್ಬಿನ ಉಪ ಉತ್ಪನ್ನಗಳ ಲಾಭವನ್ನು ಕೂಡಲೇ ಹಂಚಿಕೆ ಮಾಡಬೇಕು. 2022-23ನೇ ಸಾಲಿನ ವರ್ಷದ ಕಬ್ಬಿನ ಎಫ್‌ಆರ್‌ಪಿ ನಿಗದಿ ಮಾಡಿರುವ ಹೆಚ್ಚುವರಿ ದರ 150 ರೂ. ಕೊಡಬೇಕು. ಬಣ್ಣಾರಿ ಸಕ್ಕರೆ ಕಾರ್ಖಾನೆ ಸರ್ಕಾರ ಜಾರಿ ಮಾಡಿರುವ ದ್ವಿಪಕ್ಷಿಯ ಒಪ್ಪಂದದ ಪ್ರಕಾರ ಪತ್ರವನ್ನು ಡಿಜಿಟಲೀಕರಣ ಆ್ಯಪ್ ಮೂಲಕ ಬಿಡುಗಡೆ ಮಾಡಬೇಕು ಎಂದರು.