

ಬೆಟ್ಟದಪುರ: ಬೆಟ್ಟದಪುರದಲ್ಲಿ ಕುರಿ, ಮೇಕೆ ಮಾರಾಟ ಮಾಡಲು ಹರಾಜು ಮಾರುಕಟ್ಟೆ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಎಪಿಎಂಸಿ ಆವರಣದಲ್ಲಿ ಕುರಿ ಮೇಕೆ ವೈಜ್ಞಾನಿಕ ಹರಾಜು ಮಾರುಕಟ್ಟೆ ನಿರ್ಮಾಣಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಮೈಸೂರು ಜಿಲ್ಲೆಯಲ್ಲಿಯೇ ಇಂತಹ ಮಾರುಕಟ್ಟೆ ಪ್ರಥಮವಾಗಿ ಇಲ್ಲಿ ನಿರ್ಮಾಣವಾಗುತ್ತಿದೆ. ಗ್ರಾಮದಲ್ಲಿ ಸಂತೆ ಕಟ್ಟುವ ಸಂದರ್ಭದಲ್ಲಿ ರೈತರು ಹಾಗೂ ಸಾರ್ವಜನಿಕರು ತಮ್ಮ ಕುರಿ, ಮೇಕೆಗಳನ್ನು ಮಾರಾಟ ಮಾಡುವಾಗ ರಸ್ತೆಬದಿ ನೂರೆಂಟು ಸಮಸ್ಯೆ ಎದುರಿಸುತ್ತಿದ್ದರು. ಆದರೆ ಈಗ ಪ್ರತ್ಯೇಕವಾಗಿ ಅವುಗಳ ಮಾರಾಟಕ್ಕೆ ಹರಾಜು ಮಾರುಕಟ್ಟೆ ನಿರ್ಮಾಣವಾಗುತ್ತಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಉಪಾಧ್ಯಕ್ಷೆ ಲಕ್ಷ್ಮೀ, ಸದಸ್ಯೆ ವೀಣಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು, ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕಿ ಸಂಗೀತಾ, ಮುಖಂಡರಾದ ಸರಸ್ಪತಿ, ಜಯಚಂದ್ರ, ಪುಟ್ಟರಾಜು, ಜಯರಾಮೇಗೌಡ, ರಾಜು, ಸಣ್ಣಸ್ವಾಮಿಗೌಡ, ತಾಪಂ ಇಒ ಸುನೀಲ್, ವಲಯ ಅರಣ್ಯಾಧಿಕಾರಿ ಪದ್ಮಶ್ರೀ, ಜಿ.ಪಂ ಇಂಜಿನಿಯರ್‌ಗಳಾದ ಮಲ್ಲಿಕಾರ್ಜುನ, ಸುಭಾಸ್, ಸಿಡಿಪಿಒ ಮಮತಾ, ಸಿಪಿಐ ದೀಪಕ್, ಪಿಎಸ್‌ಐ ಶಿವಶಂಕರ್, ಕಂದಾಯ ನಿರೀಕ್ಷಕ ಅಜ್ಮಲ್, ಪಿಡಿಒ ಮಂಜುನಾಥ್ ಇತರರು ಇದ್ದರು.