ರೈತರು ಬೆಳೆ ವಿಮೆ ಸಮೀಕ್ಷೆ ಮಾಡಲಿ

Published on

ಇಂಡಿ: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದೆ. ರೈತರು ತಾವೇ ಖುದ್ದಾಗಿ ಗೂಗಲ್ ಪ್ಲೋ ಸ್ಟೋರ್‌ನಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು ಎಂದು ಉಪ ಕೃಷಿ ನಿರ್ದೇಶಕ ಚಂದ್ರಕಾಂತ ಪವಾರ ತಿಳಿಸಿದ್ದಾರೆ. ಪಟ್ಟಣದ ಕೃಷಿ ಉಪನಿರ್ದೇಶಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರೈತರು ತಮ್ಮ ಬೆಳೆ ವಿವರಗಳನ್ನು ದಾಖಲಿಸುವುದರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ, ಪ್ರವಾಹ ಕುರಿತು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ಅನುಕೂಲವಾಗಲಿದೆ. ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಸದುಪಯೋಗ ಪಡೆದುಕೊಳ್ಳಬೇಕಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ಕಂದಾಯ ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ, ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಪವಾರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net